ದಿನಾಂಕ 07 /05/ 2025ನೇ ಬುಧವಾರದಂದು 2024 25 ನೇ ಸಾಲಿನ ಹತ್ತನೇ ತರಗತಿಯ ಸಾರ್ವತ್ರಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದ ಸಾಧಕರಿಗೆ ಹಾಗೂ ಶಿಕ್ಷಕರಿಗೆ ಪ್ರತಿಭಾ ಅಭಿನಂದನಾ ಕಾರ್ಯಕ್ರಮವು ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪಟ್ಟೆ ಇಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣಭಟ್ ಅವರು ವ ಹಿಸಿ ವಿದ್ಯಾರ್ಥಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಮಾತುಗಳನ್ನು ಆಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣ ಪಟ್ಟೆ ವಿದ್ಯಾಸಂಸ್ಥೆಗಳ ಸದಸ್ಯರಾದ ಶ್ರೀಯುತ ಗಣರಾಜ ಕುಂಬ್ಳೆ, ಪ್ರತಿಭಾ ಪ್ರೌಢಶಾಲೆಯ ಪೋಷಕ ಸಮಿತಿ ಅಧ್ಯಕ್ಷರಾದ ಶ್ರೀಯತ ಲಿಂಗಪ್ಪಗೌಡ, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಶ್ರೀಯುತ ರಾಜಗೋಪಾಲ್ ಸರ್ ಭಾಗವಹಿಸಿದರು. 2024 25 ನೇ ಸಾಲಿನಲ್ಲಿ ನೂರು ಶೇಕಡಾ ಫಲಿತಾಂಶ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಹಾಗೂ ಗುರುಗಳಿಗೆ ಕಿರು ಕಾಣಿಕೆ ಕೊಟ್ಟು ಗೌರವಿಸಿದರು.
ಒಟ್ಟು 33 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ,ಹಾಗೂ ಮೂರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡು ಸಂಸ್ಥೆಗೆ ನೂರು ಶೇಕಡ ಫಲಿತಾಂಶವನ್ನು ತಂದುಕೊಟ್ಟಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ರಶ್ಮಿತಾ ಕುಮಾರಿ ದಿಶಾ. ಜೆ.ರೈ, ಕಾರ್ತಿಕ್, ಕುಮಾರಿ ತನುಶ್ರೀ ರೈ ತಮಾ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಕ್ಷಕರ ಪರವಾಗಿ ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ. ಬಿಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀಯತ ವಿಘ್ನೇಶ್ ಹಿರಣ್ಯ ರವರು ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು ಪ್ರಾಥಮಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀಮತಿ ಭವಿತಾ ರವರು ವಂದಿಸಿದರು. ಪ್ರೌಢಶಾಲಾ ಶಿಕ್ಷರಾದ ಶ್ರೀ ವಿಶ್ವನಾಥ್ ಗೌಡ ಬೊಳ್ಳಾಡಿ ಅವರು ಕಾರ್ಯಕ್ರಮ ನಿರೂಪಿಸಿದರು