ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ವಿನಾಯಕ ಚೌತಿ ಪ್ರಯುಕ್ತ ತಾಳಮದ್ದಳೆ

August 27, 2025

ಪಟ್ಟೆ ಬಡಗನ್ನೂರು: ಇಲ್ಲಿನ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇದರ ವತಿಯಿಂದ ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಗಣಪತಿ ಹವನ ಹಾಗೂ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಜರಗಿತು.

ಆರಂಭದಲ್ಲಿ ವಿದ್ವಾನ್ ಕೃಷ್ಣಕುಮಾರ ಉಪಾಧ್ಯಾಯರ ನೇತೃತ್ವದಲ್ಲಿ ಮಹಾಗಣಪತಿ ಹವನವು ನೆರವೇರಿತು. ತದನಂತರ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ವೇದಿಕೆಯಲ್ಲಿ ತಾಳಮದ್ದಳೆ ಕಾರ್ಯಕ್ರಮವು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀಗಳಾದ ಲಕ್ಷ್ಮೀನಾರಾಯಣ ಭಟ್ಟ ಬಟ್ಯಮೂಲೆ, ಚಿ| ಆದಿತ್ಯಕೃಷ್ಣ ದ್ವಾರಕಾ, ಚೆಂಡೆ-ಮದ್ದಳೆ-ಚಕ್ರತಾಳದಲ್ಲಿ ಚಿ| ಶ್ರೀಹರಿ ಪದ್ಯಾಣ, ಚಿ|ಸ್ಕಂದಗಣಪತಿ ಅಡ್ಕಸ್ಥಳ, ಕು|ಅಕ್ಷರೀ ದ್ವಾರಕಾ ಇವರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಗಳಾದ, ಗಣರಾಜ ಕುಂಬ್ಳೆ, ವೆಂಕಟೇಶ ಭಟ್ ಬಾಳಿಲ, ಕೃಷ್ಣಮೂರ್ತಿ ಭಟ್ ಕೆಮ್ಮಾರ, ಕು| ಧನ್ಯಶ್ರೀ ಮಿಂಚಿನಡ್ಕ, ಕು|ಕೀರ್ತನಾ ಅರ್ತ್ಯಡ್ಕ ಇವರು ಭಾಗವಹಿಸಿದರು.

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಹಾಗೂ ದ್ವಾರಕಾ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಇವರು ಕಲಾವಿದರನ್ನು ಸ್ವಾಗತಿಸಿ, ಗೌರವಿಸಿದರು. ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ, ಆಡಳಿತ ಮಂಡಳಿಯ ಸದಸ್ಯರುಗಳಾದ ಶ್ರೀ ಹರಿಕೃಷ್ಣ ಭಟ್, ಶ್ರೀ ವೆಂಕಟಕೃಷ್ಣ ಶರ್ಮ, ಶ್ರೀ ಜಿ ಪರಮೇಶ್ವರ ಭಟ್, ಮುಖ್ಯ ಗುರುಗಳಾದ ಶೀಮತಿ ಸುಮನ ಬಿ ಮಾತಾಜಿ, ಶ್ರೀ ರಾಜಗೋಪಾಲ ಎನ್, ಪೋಷಕ ಮಂಡಳಿಯ ಸದಸ್ಯರುಗಳು ಹಾಗೂ ಎಲ್ಲಾ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Website advt design

Related Blog

Surabhi Goshala
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು
parents meeting of sri krishna educational institutions english medium
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ
sri krishna educational institutions primary section parents meeting
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ