ದಿನಾಂಕ : 05-02-2025 ರಂದು ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ದ್ವಾರಕೋತ್ಸವ 2025 ರ “ಆಮಂತ್ರಣ ಪತ್ರಿಕೆ ಬಿಡುಗಡೆ” ಕಾರ್ಯಕ್ರಮವನ್ನು ಶ್ರೀಯುತ ಬೆಟ್ಟ ಈಶ್ವರ ಭಟ್ ಹಿರಿಯ ನ್ಯಾಯವಾದಿಗಳು ಪುತ್ತೂರು ಇವರು ಬಿಡುಗಡೆಗೊಳಿಸಿ ಮಾತಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್, ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀಯುತ ಗಣರಾಜ ಕುಂಬ್ಳೆ, ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಅಶ್ವಿನಿ ಎನ್, ಶ್ರೀಯುತ ಅಮೃತಕೃಷ್ಣ ಮತ್ತು ಶ್ರೀಮತಿ ಅಮೃತಾ ಶಾನುಭಾಗ್ ಸಭೆಯಲ್ಲಿ ಉಪಸ್ಥಿತರಿದ್ದರು. ಗಣ್ಯರನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತಾಡಿ
ಇದೇ ಬರುವ ಫೆಬ್ರವರಿ 16 “ದ್ವಾರಕೋತ್ಸವ 2025” ರ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತ ಭಾಷಣವನ್ನು ಸಂಸ್ಥೆಯ ಸಿಬ್ಬಂದಿಯಾದ ಶ್ರೀಯುತ ದುರ್ಗಾ ಗಣೇಶ್ ಇವರು ನಡೆಸಿಕೊಟ್ಟರು, ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಯುತ ಅಮೃತ ಕೃಷ್ಣ ಇವರು ಧನ್ಯವಾದ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಬಂಧುಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು