ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ

June 16, 2025
English Medium Parents meeting

ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಸಾಲಿನ ಪ್ರಥಮ ಪೋಷಕರ ಸಭೆಯು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ಇವರು ವಹಿಸಿ ಸ್ಪರ್ಧಾತ್ಮಕ ಯುಗದಲ್ಲಿ ಜಾಗತೀಕರಣ ಕಾಲದಲ್ಲಿ ಆಂಗ್ಲ ಭಾಷೆಯ ಅಗತ್ಯ ಎಲ್ಲರಿಗೂ ಇದೆ ಹಾಗಾಗಿ ಗ್ರಾಮೀಣ ಪ್ರದೇಶವಾದ ಪಟ್ಟೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯು ಅನಿವಾರ್ಯವೆಂದು ಮನಗಂಡು ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭ ಮಾಡಿದೆವು. ಪೋಷಕರಾದ ತಮ್ಮೆಲ್ಲರ ಸಹಕಾರ ಬಹಳ ಮುಖ್ಯ ಎಂದು ಹೇಳಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್ ಅವರು ಸ್ವಾಗತಿಸಿ ಸುಸಂಸ್ಕೃತ ವಿದ್ಯಾರ್ಥಿಯಾಗಿ ಸಮಾಜಕ್ಕೆ ನೀಡುವುದು ಆಂಗ್ಲ ಮಾಧ್ಯಮ ಶಿಕ್ಷಣದ ಮೂಲ ಉದ್ದೇಶ ಎಂದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಸತೀಶ್ ಕೊಪ್ಪಳ ಉಪಾಧ್ಯಕ್ಷರಾಗಿ ಶ್ರೀಮತಿ ದೀಕ್ಷಾ ರೈ ಅನಿಲೆ, ಸದಸ್ಯರಾಗಿ ಶ್ರೀಮತಿ ವಿನುತಾ ಅರೆಪ್ಪಾಡಿ ಹಾಗೂ ಶ್ರೀಮತಿ ಶುಭಶ್ರೀ ಪಟ್ಟೆ ಇವರನ್ನು ಆಯ್ಕೆ ಮಾಡಲಾಯಿತು. ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ನವ್ಯಶ್ರೀ ಮಾತಾಜಿ ಪ್ರಾರ್ಥಿಸಿ, ಶ್ರೀಮತಿ ಭಾರತಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಅಶ್ವಿನಿ ಮಾತಾಜಿ ಧನ್ಯವಾದಗಳನ್ನಿತ್ತರು. ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Website advt design

Related Blog

Surabhi Goshala
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು
parents meeting of sri krishna educational institutions english medium
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ
sri krishna educational institutions primary section parents meeting
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ