ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

July 10, 2025
Guru Purnima program at Sri Krishna Educational Institutions

ಪಟ್ಟೆ ಬಡಗನ್ನೂರು:- ದಿನಾಂಕ 10.07.2024 ನೇ ಗುರುವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ನಡೆಸಲಾಯಿತು. ಸನಾತನ ಪರಂಪರೆಯ ಶ್ರೇಷ್ಠ ಮಹಾಗುರುಗಳಾದ ಶ್ರೀ ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ವಹಿಸಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಯನ್ ಅವರು ಗುರು ಪೂರ್ಣಿಮೆ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಶಾಲಾ ವಿದ್ಯಾರ್ಥಿಗಳು ಗುರು ಪೂರ್ಣಿಮೆಯ ಮಹತ್ವದ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಾತಾಜಿ ಸುಮನ ಬಿ ಗುರುಪೂರ್ಣಿಮೆಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲಾ ಗುರುವೃಂದದವರು ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗುರುಗಳ ಆಶೀರ್ವಾದವನ್ನು ಪಡೆದರು. ಪ್ರಾಥಮಿಕ ಶಾಲಾ ಮುಖ್ಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಯನ್ ವಂದಿಸಿದರು. ಎಲ್ಲಾ ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ