ಶ್ರೀಕೃಷ್ಣ ವಿದ್ಯಾಸಂಸ್ಥೆಗಳಿಗೆ ಪುತ್ತೂರು ದ್ವಾರಕಾ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ನಿಂದ ಇನ್ವರ್ಟರ್ ಕೊಡುಗೆ

May 14, 2025
Shri Krishna Instituiton

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ


ದಿನಾಂಕ 12.05.2025ನೇ ಸೋಮವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಇಲ್ಲಿಯ 1ನೇ ತರಗತಿಯಿಂದ 7ನೇ ತರಗತಿಯವರೆಗೂ ಪ್ರತಿಭಾ ಪ್ರೌಢಶಾಲೆ ಪಟ್ಟೆಯ 8 ನೇ ತರಗತಿಯಿಂದ 10ನೇ ತರಗತಿಯ ಎಲ್ಲಾ ತರಗತಿ ಕೋಣೆಗಳಿಗೂ ಮತ್ತು ಕಚೇರಿಗಳಿಗೆ ಇನ್ವರ್ಟರ್ ನ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಈ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿದ್ದು ವಿದ್ಯುತ್ ಅಭಾವದಿಂದಾಗಿ ಮಕ್ಕಳಿಗೆ ಸರಿಯಾದ ಸ್ಮಾರ್ಟ್ ಕ್ಲಾಸ್ ಗಳನ್ನು ನಡೆಸಲು ಮಳೆಗಾಲದಲ್ಲಿ ವಿದ್ಯುತ್ ದೀಪ ಇಲ್ಲದೆ ತರಗತಿ ನಡೆಸಲು ಬಹಳ ತೊಂದರೆ ಆಗುತ್ತಿತ್ತು. ಈ ವಿಚಾರವನ್ನು ಮನಗಂಡ ದ್ವಾರಕ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಪುತ್ತೂರು ಇವರ ವತಿಯಿಂದ ಇನ್ವರ್ಟರ್ ನ ವ್ಯವಸ್ಥೆಯನ್ನು ಮಾಡಿರುತ್ತಾರೆ ಇದಕ್ಕೆ ಸುಮಾರು ಅಂದಾಜು ವೆಚ್ಚ ರೂಪಾಯಿ 1,60,000(ಒಂದು ಲಕ್ಷದ ಅರುವತ್ತು ಸಾವಿರ )ಆಗಿದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ಅನಾನುಕೂಲ ಆಗದಂತೆ ಅಧ್ಯಯನಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ದ್ವಾರಕ ಪ್ರತಿಷ್ಠಾನದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ