ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

November 2, 2025
kannada rajyotsava celebration sri krishna educational institutions

ಬಡಗನ್ನೂರು:- ದಿನಾಂಕ 01-11-2025 ನೇ ಶನಿವಾರದಂದು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ ಹಿರಣ್ಯ ವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಹಾಗೂ ಕನ್ನಡ ನಾಡಿನ ಬಗ್ಗೆ ಗೀತೆಗಳನ್ನು ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಶ್ರೀಮಾನ್ ಕೇಶವ ಪ್ರಸಾದ್ ನೀಲಗಿರಿ, ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮಾನ್ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ , ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜ ಗೋಪಾಲರು ಉಪಸ್ಥಿತರಿದ್ದು, ಕನ್ನಡ ನಾಡು ನುಡಿಯ ಬಗ್ಗೆ ಮಾತುಗಳನ್ನಾಡಿದರು. ಶ್ರೀಮತಿ ಚಿತ್ರ ಮಾತಾಜಿ ಸ್ವಾಗತಿಸಿ, ಶ್ರೀಮತಿ ಜಯಶ್ರೀ ಮಾತಾಜಿ ವಂದಿಸಿದರು. ಶ್ರೀಮತಿ ಲತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ