ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ

June 14, 2025
Parents meeting

ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆಯು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಇವರು ವಹಿಸಿ ಸುಸಂಸ್ಕೃತ ಸಮಾಜವನ್ನು ನಿರ್ಮಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವುದು ನಮ್ಮ ಮೊದಲ ಆದ್ಯತೆ ಆಗಿದೆ ಅದಕ್ಕೆ ಪೋಷಕರೆಲ್ಲರ ಸಹಕಾರವನ್ನು ನೀಡಬೇಕಾಗಿ ವಿನಂತಿಸಿಕೊಂಡರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜ್ ಗೋಪಾಲ ಯನ್ ಅವರು ಶಾಲೆಯಲ್ಲಿ ನಡೆಯುವ ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿಯಪಡಿಸಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ಪ್ರಾಸ್ತವಿಕಾ ಮಾತುಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೆರೆದಿರುವ ಪೋಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ ವಂದಿಸಿ ಗಣಿತ ಶಿಕ್ಷಕಿಯಾದ ಮಾತಾಜಿ ಪ್ರೀತಿ ಕುಮಾರಿ ಎಂ ಪಿ ಯವರು ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಶಿಕ್ಷಕರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ