ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025

November 9, 2025
sri-krishna-educational-institutions-patte-school-annual-day-2025

ಪಟ್ಟೆ ಬಡಗನ್ನೂರು:- ದಿನಾಂಕ:- 08 -11 – 2025 ಶನಿವಾರದಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ಜರಗಿತು.
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡುವ ಮೂಲಕ ಸುಸಂಸ್ಕೃತವಾದಂತಹ ವಿದ್ಯೆಯನ್ನು ನೀಡಿ ದೇಶದ ಸತ್ಪ್ರಜೆಗಳಾಗಿ ಬಾಳಬೇಕೆಂದು ಹಾರೈಸಿದರು. ಸಂಸ್ಥೆಯ ಸಂಚಾಲಕರು ಶ್ರೀಮಾನ್ ವಿಘ್ನೇಶ್ ಹಿರಣ್ಯ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ಶಾಲಾ ವರದಿಯನ್ನು ವಾಚಿಸಿದರು. ಆಂಗ್ಲ ಮಾಧ್ಯಮ ಶಾಲಾ ಬಹುಮಾನ ಪಟ್ಟಿಯನ್ನು ಶ್ರೀಮತಿ ಅಶ್ವಿನಿ ಮಾತಾಜಿ, ಪ್ರಾಥಮಿಕ ಶಾಲಾ ಬಹುಮಾನ ಪಟ್ಟಿಯನ್ನು ಶ್ರೀಮತಿ ಚಿತ್ರ ಮಾತಾಜಿ, ಪ್ರೌಢಶಾಲಾ ಬಹುಮಾನ ಪಟ್ಟಿಯನ್ನು ಶ್ರೀಮತಿ ಪ್ರೀತಿ ಕುಮಾರಿ ಮಾತಾಜಿ ವಾಚಿಸಿದರು. 2024 – 25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಾರಾದ ಕುಮಾರಿ ರಶ್ಮಿತಾ, ಕುಮಾರಿ ತನುಶ್ರೀ ರೈ, ಕುಮಾರಿ ದಿಶಾ ಜೆ ರೈ, ಫಾತಿಮಾ ಜಸಿಲ, ಕೀರ್ತನ್, ನವನೀತ, ವೀಕ್ಷಾ, ಕಾರ್ತಿಕ್, ಪವನ್ ಚಂದ್ರ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಎಂಬ ಬಹುಮಾನವನ್ನು ಕುಮಾರಿ ತನುಶ್ರೀ ರೈಗೆ ನೀಡಿ ಗೌರವಿಸಲಾಯಿತು. ವೃತ್ತಿಯಿಂದ ನಿವೃತ್ತಿ ಆಗುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ ಎಂ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಾದ ಶ್ರೀಮಾನ್ ರಾಮಚಂದ್ರಪ್ಪನವರಿಗೆ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಷಣ್ಮುಖ ದೇವಾ ಪ್ರೌಢಶಾಲೆ ಪೆರ್ಲಂಪಾಡಿಯ ಸಂಚಾಲಕರಾದ ಶ್ರೀ ಶಿವರಾಮ್ ಭಟ್ ಬೀರ್ಣಕಜೆ, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ. ಡಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸದಸ್ಯರಾದ ಶ್ರೀ ಗಣರಾಜ ಕುಂಬ್ಳೆ, ಶ್ರೀ ಜಿ. ಪರಮೇಶ್ವರ್ ಭಟ್, ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ ಹಿರಣ್ಯ, ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷರಾದ ಶ್ರೀ ಲಿಂಗಪ್ಪ ಗೌಡ ಮೋಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ, ಯನ್ ಉಪಸ್ಥಿತರಿದ್ದರು. ಶ್ರೀಮತಿ ಭವಿತಾ ಮಾತಾಜಿ ಸ್ವಾಗತಿಸಿ, ಶ್ರೀಮತಿ ಲತಾ ಮಾತಾಜಿ ವಂದಿಸಿದರು. ಶ್ರೀಮತಿ ಶೈಲ ಶ್ರೀ ಮಾತಾಜಿ ಮತ್ತು ಶ್ರೀಮತಿ ಪ್ರಜ್ಞಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಮತ್ತೆ ಅದೇ ವೇದಿಕೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಭರತನಾಟ್ಯ, ಸಂಗೀತ, ಕರಾಟೆ, ಯೋಗ, ತುಳು ಜನಪದ ನೃತ್ಯಗಳು ಮತ್ತು ನರಕಾಸುರ ಮೋಕ್ಷ ಎಂಬ ಯಕ್ಷಗಾನ ಕಥಾ ಭಾಗವನ್ನು ಆಡಿ ತೋರಿಸಲಾಯಿತು.

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ