ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪೋಷಕರ ಸಭೆ

October 16, 2025
sri krishna high school parents meeting

ಬಡಗನ್ನೂರು: ದಿನಾಂಕ 16/10/2025 ನೇ ಗುರುವಾರದಂದು ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ವಹಿಸಿ ಸುಸಂಸ್ಕೃತ ಸಮಾಜಕ್ಕೆ ತಮ್ಮ ಮಕ್ಕಳನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ,ಮತ್ತು ನಮ್ಮ ಜೀವನ ಶೈಲಿಯನ್ನು ಹೇಗೆ ಬದಲಾಯಿಸಿಕೊಳ್ಳಬೇಕೇಂದು ತಿಳಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯರವರು ಪೋಷಕರ ಸಭೆಯ ಮಹತ್ವವನ್ನು ಸಭೆಗೆ ತಿಳಿಯಪಡಿಸಿದರು. ಕಾರ್ಯಕ್ರಮದಲ್ಲಿ ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷರಾದ ಶ್ರೀಯುತ ಲಿಂಗಪ್ಪ ಗೌಡ ಮೂಡಿಕೆ, ಉಪಸ್ಥಿತರಿದ್ದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೆರೆದಿರುವ ಪೋಷಕರ ಪರವಾಗಿ ಶ್ರೀಮತಿ ಯಮುನಾ ಕೆ, ಶ್ರೀಮತಿ ಯಶೋದಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಯನ್ ವಂದಿಸಿದರು. ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕರಾದ ಶ್ರೀಮಾನ್ ವಿಶ್ವನಾಥ್ ಬಿ ರವರು ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ವಿಭಾಗದ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ