ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರೆಣೆ

August 15, 2025

ಪಟ್ಟೆ ಬಡಗನ್ನೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಸೇನೆಯ ನಿವೃತ್ತ ಯೋಧರಾದ ಶ್ರೀ ಸುಬ್ಬಪ್ಪ ಪಾಟಾಳಿ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣ್ಯರಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಸುಬ್ಬಪ್ಪ ಪಾಟಾಳಿಯವರು ವಿದ್ಯಾರ್ಥಿಗಳಿಗೆ ದೇಶಪ್ರೇಮದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್, ಸ್ವಾತಂತ್ರ್ಯಕ್ಕಾಗಿ ಮಡಿದ ವೀರರನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ, ಪ್ರೌಢ ಶಾಲಾ ವಿಭಾಗದ ಪೋಷಕ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪ ಗೌಡ ಮೂಡಿಕೆ, ಪ್ರಾಥಮಿಕ ವಿಭಾಗದ ಪೋಷಕ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಕೇಶವಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ವಿಬಾಗದ ಪೋಷಕ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸತೀಶ್ ಕೊಪ್ಪಳ, ಉಭಯ ಸಂಸ್ಥೆಗಳ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್, ಶ್ರೀಮತಿ ಸುಮನಾ ಬಿ ಮಾತಾಜಿ ಉಪಸ್ಥಿತರಿದ್ದರು. ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಲಾವಿಕ ಬಿ ರೈ ಸ್ವಾಗತಿಸಿದರು. ಐದನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ರೂಪಶ್ರೀ ವಂದಿಸಿದರು. ಒಂಭತ್ತನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಶ್ರಾವ್ಯ ಬಿ ಕಾರ್ಯಕ್ರಮವನ್ನು ನಿರೂಪಿಸಿದರು.

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ