ಪಟ್ಟೆ ಬಡಗನ್ನೂರು:- ದಿನಾಂಕ:28/06/2025ನೇ ಶನಿವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪಟ್ಟೆಯಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ವತಿಯಿಂದ ಉಚಿತ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಅವರು ವಹಿಸಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಉಚಿತವಾಗಿ ಸಮವಸ್ತ್ರವನ್ನು ವಿತರಣೆ ಮಾಡುತ್ತಿದ್ದೇವೆ ಎಂದರು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಾತಾಜಿ ಶ್ರೀಮತಿ ಸುಮನ ಬಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಯನ್ ಹಾಗೂ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಪೋಷಕ ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ನೀಲಗಿರಿ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಟ್ಟಿಯನ್ನು ಶ್ರೀಮಾನ್ ರಾಮಚಂದ್ರಪ್ಪ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪಟ್ಟಿಯನ್ನು ಮಾತಾಜಿ ಶ್ರೀಮತಿ ಧನಲಕ್ಷ್ಮಿ ಅವರು ವಾಚಿಸಿದರು. ಶ್ರೀಮಾನ್ ರಾಜಗೋಪಾಲ ಯನ್ ಅವರು ಸ್ವಾಗತಿಸಿ, ಮಾತಾಜಿ ಶ್ರೀಮತಿ ಸುಮನ ಬಿ ವಂದಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲಾ ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.