ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ

June 5, 2025
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ

ದಿನಾಂಕ 05-06-2025 ನೇ ಗುರುವಾರ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ವತಿಯಿಂದ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಆವರಣದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀ ಮದನ್ ಬಿ.ಕೆ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಇವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ವಿಶ್ವ ಪರಿಸರ ದಿನದ ಮಹತ್ವದ ಬಗ್ಗೆ ಪ್ರತಿಭಾ ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ.ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಅರಣ್ಯ ಸಮಿತಿ ಬಡಗನ್ನೂರು ಮಾಜಿ ಅಧ್ಯಕ್ಷರಾದ ಶ್ರೀಮತಿ ರೇಖಾ ನಾಗರಾಜ್, ಪ್ರತಿಭಾ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಲಿಂಗಪ್ಪಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಯುತ ಕೇಶವ ಪ್ರಸಾದ್, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ ಎನ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಅವರು ಪ್ಲಾಸ್ಟಿಕ್ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ಶ್ರೀ.ಕೆ.ರಾಮಚಂದ್ರಪ್ಪ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ಶ್ರೀ ವಿಶ್ವನಾಥ. ಬಿ. ರವರು ವಾಚಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಶ್ರೀಮತಿ ನವ್ಯಶ್ರೀ ಸ್ವಾಗತಿಸಿ, ಶ್ರೀಮತಿ ಮಮತಾ ಪಿ ಧನ್ಯವಾದಗಳನ್ನಿತ್ತರು. ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕರು ಪ್ರತಿಭಾ ಪ್ರೌಢಶಾಲೆಯ ಶಿಕ್ಷಕರು ವಿವಿಧ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ವತಿಯಿಂದ ಪರಿಸರಕ್ಕೆ ಸಂಬಂಧಪಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು  ನಡೆಸಿಕೊಡಲಾಯಿತು.

Website advt design

Related Blog

Surabhi Goshala
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು
parents meeting of sri krishna educational institutions english medium
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ
sri krishna educational institutions primary section parents meeting
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ